Mark 1:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀಮೋನನ ಅತ್ತೆ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದಳು. ಅಲ್ಲಿನ ಜನರು ಅವಳ ಬಗ್ಗೆ ಯೇಸುವಿಗೆ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
Kannada BSI Bible 2016
ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಸೀಮೋನನ ಅತ್ತೆ ಜ್ವರ ಬಂದು ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
Kannada Bible (KNCL) BSI 2016
ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು.