Mark 1:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
Kannada BSI Bible 2016
ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ತರತರವಾದ ರೋಗಗಳಿಂದ ಮೈಯಲ್ಲಿ ನೆಟ್ಟಗಿಲ್ಲದ ಬಹು ಜನರನ್ನು ವಾಸಿಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಮತ್ತು ತಾನು ಇಂಥವನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡಗೊಡಿಸಲಿಲ್ಲ.
Kannada Bible (KNCL) BSI 2016
ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು. ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.