Mark 1:43 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವನಿಗೆ, “ನಾನು ನಿನ್ನನ್ನು ಗುಣಪಡಿಸಿದೆನೆಂದು ಯಾರಿಗೂ ಹೇಳದೆ, ನೇರವಾಗಿ ಯಾಜಕನ ಬಳಿಗೆ ಹೋಗಿ ಮೈ ತೋರಿಸು. ನೀನು ಗುಣಹೊಂದಿರುವುದರಿಂದ ಮೋಶೆಯ ಆಜ್ಞಾನುಸಾರವಾಗಿ ದೇವರಿಗೆ ಕಾಣಿಕೆಯನ್ನು ಅರ್ಪಿಸು. ನಿನಗೆ ಗುಣವಾಯಿತು ಎಂಬುದಕ್ಕೆ ಇದು ಜನರಿಗೆ ಸಾಕ್ಷಿಯಾಗಿರುವುದು” ಎಂದು ಎಚ್ಚರಿಕೆ ನೀಡಿ ಕಳುಹಿಸಿಬಿಟ್ಟನು. (Verses 43-44)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;
Kannada BSI Bible 2016
ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು;
Kannada Bible (KNCL) BSI 2016
ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನೋಡು, ಇದನ್ನು ಯಾರಿಗೂ ಹೇಳಬೇಡ. ಆದರೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿ, ಮೋಶೆಯು ಆಜ್ಞಾಪಿಸಿದ್ದನ್ನು ಶುದ್ಧತ್ವಕ್ಕಾಗಿ ಸಮರ್ಪಿಸು ಇದು ಅವರಿಗೆ ಸಾಕ್ಷಿಯಾಗಿರಲಿ,” ಎಂದು ಅವನಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿ, ಕೂಡಲೇ ಅವನನ್ನು ಕಳುಹಿಸಿಬಿಟ್ಟರು.