Mark 1:45 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
Kannada BSI Bible 2016
ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಹೊರಟುಹೋಗಿ ಆ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸಿದ್ದರಿಂದ ಯೇಸು ಬಹಿರಂಗವಾಗಿ ಇನ್ನು ಯಾವ ಊರೊಳಕ್ಕೂ ಹೋಗಲಾರದೆ ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು. ಮತ್ತು ಜನರು ನಾಲ್ಕು ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
Kannada Bible (KNCL) BSI 2016
ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.