Mark 1:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
Kannada BSI Bible 2016
ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್‌ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇವಿುನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
Kannada Bible (KNCL) BSI 2016
ಜುದೇಯ ಪ್ರಾಂತ್ಯದ ಎಲ್ಲೆಡೆಗಳಿಂದಲೂ ಜೆರುಸಲೇಮಿನಿಂದಲೂ ಜನರು ಆತನ ಬಳಿಗೆ ಹೋಗುತ್ತಿದ್ದರು. ಅವರು ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಆತನಿಂದ ಸ್ನಾನದೀಕ್ಷೆ ಪಡೆದುಕೊಳ್ಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.