Mark 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನಗಳಲ್ಲಿ ಯೇಸು ಗಲಿಲಾಯದ ನಜರೇತಿನಿಂದ ಯೋಹಾನನಿದ್ದ ಸ್ಥಳಕ್ಕೆ ಬಂದನು. ಯೋಹಾನನು ಯೇಸುವಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
Kannada BSI Bible 2016
ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ಸ್ನಾನಮಾಡಿಸಿಕೊಂಡನು.
Kannada Bible (KNCL) BSI 2016
ಹೀಗಿರುವಲ್ಲಿ, ಒಂದು ದಿನ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಬಂದು, ಜೋರ್ಡನ್ ನದಿಯಲ್ಲಿ ಯೊವಾನ್ನನಿಂದ ದೀಕ್ಷಾಸ್ನಾನ ಪಡೆದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.