Mark 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು ಆ ಸ್ಥಳವನ್ನು ಬಿಟ್ಟು ಜುದೇಯ ಪ್ರಾಂತ್ಯಕ್ಕೆ ಹಾಗೂ ಜೋರ್ಡನ್ ನದಿಯ ಆಚೆದಡಕ್ಕೆ ಹೋದನು. ಅನೇಕ ಜನರು ಮತ್ತೆ ಆತನ ಬಳಿಗೆ ಬಂದರು. ಯೇಸು ಎಂದಿನಂತೆ ಆ ಜನರಿಗೆ ಉಪದೇಶಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
Kannada BSI Bible 2016
ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಆತನು ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರಿಗಿ ಗುಂಪು ಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರಿಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
Kannada Bible (KNCL) BSI 2016
ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪುಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.