Mark 10:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.
Kannada BSI Bible 2016
ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಅವರನ್ನು ಗದರಿಸಿದರು.
Kannada Bible (KNCL) BSI 2016
ಕೆಲವರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಹರಸಲೆಂದು ಅವುಗಳನ್ನು ಯೇಸುಸ್ವಾಮಿಯ ಬಳಿಗೆ ಕರೆತಂದರು. ಶಿಷ್ಯರು ಆ ಜನರನ್ನು ಗದರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು ತಮ್ಮ ಚಿಕ್ಕಮಕ್ಕಳನ್ನು ಯೇಸು ಮುಟ್ಟಬೇಕೆಂದು ಅವರ ಬಳಿಗೆ ತಂದರು. ಆದರೆ ಶಿಷ್ಯರು ಜನರನ್ನು ಗದರಿಸಿದರು.