Mark 10:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.
Kannada BSI Bible 2016
ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹೊರಟು ದಾರಿಹಿಡಿದು ಹೋಗುವಾಗ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಲಾಗಿ ಯೇಸು ಅವನಿಗೆ -
Kannada Bible (KNCL) BSI 2016
ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು.