Mark 10:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
Kannada BSI Bible 2016
ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಹತ್ಯ ಮಾಡಬಾರದು; ವ್ಯಭಿಚಾರಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ಮೋಸಮಾಡಬಾರದು; ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.
Kannada Bible (KNCL) BSI 2016
ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.