Mark 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ಪರೀಕ್ಷಿಸಲು, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.
Kannada BSI Bible 2016
ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಫರಿಸಾಯರು ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದರು.
Kannada Bible (KNCL) BSI 2016
ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೇ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಪರೀಕ್ಷಿಸುವುದಕ್ಕಾಗಿ ಯೇಸುವಿಗೆ, “ಒಬ್ಬ ಪುರುಷನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.