Mark 10:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Kannada BSI Bible 2016
ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನನ್ನು ದೃಷ್ಟಿಸಿನೋಡಿ ಪ್ರೀತಿಸಿ ಅವನಿಗೆ - ನಿನಗೆ ಒಂದು ಕಡಿಮೆಯಾಗಿದೆ; ಹೋಗು, ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
Kannada Bible (KNCL) BSI 2016
ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.