Mark 10:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಈ ಮಾತನ್ನು ಕೇಳಿ ಅವನು ನಿರಾಶೆಯಿಂದ ದುಃಖಗೊಂಡು ಹೊರಟುಹೋದನು. ಬಹಳ ಧನವಂತನಾಗಿದ್ದ ಅವನು ತನ್ನ ಅಪಾರ ಆಸ್ತಿಯನ್ನು ಮಾರಲು ಇಷ್ಟಪಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.
Kannada BSI Bible 2016
ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತಿಗೆ ಮೋರೆ ಬಾಡಿದವನಾಗಿ ದುಃಖದಿಂದ ಹೊರಟುಹೋದನು.
Kannada Bible (KNCL) BSI 2016
ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟುಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.