Mark 10:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, “ಧನವಂತನು ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.
Kannada BSI Bible 2016
ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ - ಧನವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಎಂದು ಹೇಳಿದನು.
Kannada Bible (KNCL) BSI 2016
ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ!” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸುತ್ತಲೂ ನೋಡಿ ತಮ್ಮ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!” ಎಂದರು.