Mark 10:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಈ ಮಾತನ್ನು ಕೇಳಿ ಶಿಷ್ಯರು ಬೆರಗಾದರು. ಆದರೆ ಯೇಸು ಮತ್ತೆ, “ನನ್ನ ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
Kannada BSI Bible 2016
ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು ಆತನ ಮಾತುಗಳನ್ನು ಕೇಳಿ ಬೆರಗಾದರು. ಯೇಸು ತಿರಿಗಿ ಅವರಿಗೆ - ಮಕ್ಕಳಿರಾ, ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
Kannada Bible (KNCL) BSI 2016
ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ.