Mark 10:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
Kannada BSI Bible 2016
ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಈಗಿನ ಕಾಲದಲ್ಲಿ ಮನೆ ಅಣ್ಣ ತಮ್ಮ ಅಕ್ಕ ತಂಗಿ ತಾಯಿ ಮಕ್ಕಳು ಭೂವಿು ಇವೆಲ್ಲವೂ ಹಿಂಸೆಗಳು ಸಹಿತವಾಗಿ ನೂರರಷ್ಟು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು.
Kannada Bible (KNCL) BSI 2016
ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೆ ಮುಂದಿನ ಲೋಕದಲ್ಲಿ ಅಮರಜೀವವನ್ನು ಪಡೆಯುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.