Mark 10:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಜೊತೆಯಲ್ಲಿದ್ದ ಜನರು ಜೆರುಸಲೇಮಿಗೆ ಹೋಗುತ್ತಿರಲು ಯೇಸು ಅವರೆಲ್ಲರಿಗಿಂತ ಮುಂದೆ ಹೋಗುತ್ತಿದ್ದನು. ಅದನ್ನು ನೋಡಿ ಯೇಸುವಿನ ಶಿಷ್ಯರು ಬೆರಗಾದರು. ಅವರನ್ನು ಹಿಂಬಾಲಿಸಿ ಬರುತ್ತಿದ್ದ ಜನರು ಭಯಗೊಂಡರು. ಯೇಸು ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು, ಜೆರುಸಲೇಮಿನಲ್ಲಿ ತನಗೆ ಸಂಭವಿಸಲಿರುವುದನ್ನು ಅವರಿಗೆ ಹೇಳುತ್ತಾ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
Kannada BSI Bible 2016
ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆರೂಸಲೇವಿುನ ದಾರಿಯನ್ನು ಹಿಡಿದು ಹೋಗುತ್ತಿರುವಾಗ ಯೇಸು ಅವರ ಮುಂದೆ ಮುಂದೆ ಹೋಗುತ್ತಿದ್ದನು. ಅವರು [ನೋಡಿ] ಬೆರಗಾದರು; ಆತನ ಹಿಂದೆ ಬರುವವರು ಭಯಪಡುವವರಾದರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತಿರಿಗಿ ಕರೆದುಕೊಂಡು ಮುಂದೆ ತನಗಾಗುವದನ್ನು ಹೇಳುವದಕ್ಕೆ ತೊಡಗಿ ಅವರಿಗೆ -
Kannada Bible (KNCL) BSI 2016
ಜೆರುಸಲೇಮಿಗೆ ಪ್ರಯಾಣಮಾಡುತ್ತ ಇದ್ದಾಗ ಯೇಸುಸ್ವಾಮಿ ಎಲ್ಲರಿಗಿಂತ ಮುಂದೆ ನಡೆಯುತ್ತಿದ್ದರು. ಅದನ್ನು ನೋಡಿ ಶಿಷ್ಯರು ಆಶ್ಚರ್ಯಪಟ್ಟರು. ಅವರ ಹಿಂದೆ ಬರುತ್ತಿದ್ದವರು ದಿಗಿಲುಗೊಂಡರು. ಆಗ ಯೇಸು ಹನ್ನೆರಡುಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ತಮಗೆ ಸಂಭವಿಸಲಿರುವ ವಿಷಯಗಳನ್ನು ಮತ್ತೊಮ್ಮೆ ಅವರಿಗೆ ಹೇಳತೊಡಗಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು. ಯೇಸು ಅವರ ಮುಂದಾಗಿ ಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಯೇಸುವಿನ ಹಿಂದೆ ಬರುತ್ತಿದ್ದವರು ಭಯಪಟ್ಟರು. ಯೇಸು ತಮ್ಮ ಹನ್ನೆರಡು ಮಂದಿಯನ್ನು ತಿರುಗಿ ಕರೆದು ತನಗೆ ಸಂಭವಿಸುವ ಸಂಗತಿಗಳನ್ನು ಅವರಿಗೆ ಹೇಳಲಾರಂಭಿಸಿದರು: