Mark 10:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೂ ಧರ್ಮೋಪದೇಶಕರಿಗೂ ಒಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆ ವಿಧಿಸಿ ಯೆಹೂದ್ಯರಲ್ಲದ ಜನರಿಗೆ ಒಪ್ಪಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.
Kannada BSI Bible 2016
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ. ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅನ್ಯರ ಕೈಗೆ ಒಪ್ಪಿಸುವರು.
Kannada Bible (KNCL) BSI 2016
“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸಿ ನನ್ನನ್ನು ಯೆಹೂದ್ಯರಲ್ಲದವರಿಗೆ ಒಪ್ಪಿಸುವರು.