Mark 10:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನರು ಆತನನ್ನು ನೋಡಿ ಅಪಹಾಸ್ಯ ಮಾಡುತ್ತಾರೆ, ಆತನ ಮೇಲೆ ಉಗುಳುತ್ತಾರೆ, ಆತನನ್ನು ಬಾರುಕೋಲಿನಿಂದ ಹೊಡೆಯುತ್ತಾರೆ ಮತ್ತು ಕೊಲ್ಲುತ್ತಾರೆ. ಆದರೆ ಆತನು ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುತ್ತಾನೆ” ಎಂದು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
Kannada BSI Bible 2016
ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಅವನನ್ನು ಅಪಹಾಸ್ಯಮಾಡುವರು, ಅವನ ಮೇಲೆ ಉಗುಳುವರು, ಅವನನ್ನು ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು. ಅವನು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.
Kannada Bible (KNCL) BSI 2016
ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು.