Mark 10:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮ ಒಂದು ಕೋರಿಕೆಯನ್ನು ನೀನು ನಡೆಸಿಕೊಡಬೇಕು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು.
Kannada BSI Bible 2016
ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು ಆತನಿಗೆ - ಗುರುವೇ, ನಾವು ಒಂದನ್ನು ಕೇಳಿಕೊಳ್ಳುತ್ತೇವೆ; ಅದನ್ನು ನಮಗೋಸ್ಕರ ನಡಿಸಿಕೊಡಬೇಕೆಂದು ಹೇಳಿದರು.
Kannada Bible (KNCL) BSI 2016
ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮದೊಂದು ಬಿನ್ನಹವಿದೆ. ಅದನ್ನು ನಡೆಸಿಕೊಡಬೇಕು,” ಎಂದು ವಿಜ್ಞಾಪಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಬೋಧಕರೇ, ನಾವು ಕೇಳುವುದನ್ನು ನೀವು ನಮಗೋಸ್ಕರ ಮಾಡಬೇಕು,” ಎಂದರು.