Mark 10:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು, “ನೀನು ನಿನ್ನ ರಾಜ್ಯದಲ್ಲಿ ವೈಭವದಿಂದಿರುವಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ಅನುಗ್ರಹಿಸು” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.
Kannada BSI Bible 2016
ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ಮಹಾಪದವಿ ಬಂದಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಮಾಡಬೇಕು ಅಂದರು.
Kannada Bible (KNCL) BSI 2016
“ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು,” ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವಿಗೆ, “ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು,” ಎಂದರು.