Mark 10:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.
Kannada BSI Bible 2016
ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೇಸು ಅವರನ್ನು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವದು ನಿಮ್ಮಿಂದಾದೀತೇ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವದು ನಿಮ್ಮಿಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು.
Kannada Bible (KNCL) BSI 2016
ಅದಕ್ಕೆ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು ಆಗುತ್ತದೆ,” ಎಂದು ಅವರು ಮರು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ನೀವೂ ಕುಡಿಯುವಿರೋ? ನಾನು ಪಡೆಯಲಿರುವ ದೀಕ್ಷಾಸ್ನಾನವನ್ನು ನೀವೂ ಪಡೆಯುವಿರೋ?” ಎಂದರು.