Mark 10:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನನ್ನ ಎಡಗಡೆ ಅಥವಾ ಬಲಗಡೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಆರಿಸುವವನು ನಾನಲ್ಲ. ಆ ಸ್ಥಳಗಳನ್ನು ಯಾರಿಗಾಗಿ ಸಿದ್ಧಪಡಿಸಲಾಗಿದೆಯೋ ಅವರಿಗಾಗಿಯೇ ಅವುಗಳನ್ನು ಕಾದಿರಿಸಲಾಗಿದೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
Kannada BSI Bible 2016
ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕೂತುಕೊಳ್ಳುವಂತೆ ಅನುಗ್ರಹಮಾಡುವದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.
Kannada Bible (KNCL) BSI 2016
ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದರು.