Mark 10:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಎಲ್ಲಾ ಶಿಷ್ಯರನ್ನು ಒಟ್ಟಾಗಿ ಕರೆದು, “ಯೆಹೂದ್ಯರಲ್ಲದವರು ಅಧಿಪತಿಗಳನ್ನು ಹೊಂದಿದ್ದಾರೆ. ಆ ಅಧಿಪತಿಗಳು ಜನರ ಮೇಲೆ ತಮಗಿರುವ ಅಧಿಕಾರವನ್ನು ತೋರಿಸಲು ಇಷ್ಟಪಡುತ್ತಾರೆಂಬುದು ನಿಮಗೆ ತಿಳಿದಿದೆ. ಅವರ ಪ್ರಮುಖ ನಾಯಕರುಗಳು ಜನರ ಮೇಲೆ ತಮಗಿರುವ ಅಧಿಕಾರವನ್ನೆಲ್ಲಾ ಉಪಯೋಗಿಸಲು ಇಷ್ಟಪಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
Kannada BSI Bible 2016
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರೆನಿಸಿಕೊಳ್ಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ಅವರಲ್ಲಿ ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ;
Kannada Bible (KNCL) BSI 2016
ಆಗ ಯೇಸು ಶಿಷ್ಯರೆಲ್ಲರನ್ನು ತನ್ನ ಬಳಿಗೆ ಕರೆದು, “ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ; ಇದು ನಿಮಗೆ ಗೊತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು ಅವರಿಗೆ, “ಆಳುವವರು ಎಂದೆನಿಸಿಕೊಂಡವರು ಯೆಹೂದ್ಯರಲ್ಲದವರ ಮೇಲೆ ದೊರೆತನ ಮಾಡುತ್ತಾರೆ. ಅವರಲ್ಲಿ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.