Mark 10:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.
Kannada BSI Bible 2016
ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
Kannada Bible (KNCL) BSI 2016
ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಬೋಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.