Mark 10:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಅವರು ಜೆರಿಕೊ ಎಂಬ ಊರಿಗೆ ಬಂದರು. ಯೇಸು ತನ್ನ ಶಿಷ್ಯರೊಂದಿಗೆ ಮತ್ತು ಇತರ ಅನೇಕ ಜನರೊಂದಿಗೆ ಆ ಊರನ್ನು ಬಿಟ್ಟು ಹೊರಟಿದ್ದನು. ತಿಮಾಯನ ಮಗನಾದ ಬಾರ್ತಿಮಾಯ ಎಂಬ ಕುರುಡನು ರಸ್ತೆಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
Kannada BSI Bible 2016
ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು.
Kannada Bible (KNCL) BSI 2016
ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡಗುಂಪು ಅವರನ್ನು ಹಿಂಬಾಲಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸು ತಮ್ಮ ಶಿಷ್ಯರೊಡನೆಯೂ ಅಸಂಖ್ಯಾತ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗ ಕುರುಡ ಬಾರ್ತಿಮಾಯನು ದಾರಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.