Mark 10:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಜರೇತಿನ ಯೇಸು ಆ ಮಾರ್ಗವಾಗಿ ಹೋಗುತ್ತಿದ್ದಾನೆಂದು ಅವನು ಕೇಳಿ, “ಯೇಸುವೇ, ದಾವೀದನ ಕುಮಾರನೇ, ದಯವಿಟ್ಟು ನನ್ನನ್ನು ಕರುಣಿಸು!” ಎಂದು ಗಟ್ಟಿಯಾಗಿ ಕೂಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.
Kannada BSI Bible 2016
ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕುರುಡ ಭಿಕ್ಷಗಾರನು. ಈ ಮಾರ್ಗವಾಗಿ ಹೋಗುವವನು ನಜರೇತಿನ ಯೇಸುವೆಂದು ಅವನು ಕೇಳಿ - ದಾವೀದನ ಕುಮಾರನೇ, ಯೇಸುವೇ, ನನ್ನನ್ನು ಕರುಣಿಸು ಎಂದು ಕೂಗಿಕೊಳ್ಳುವದಕ್ಕೆ ಪ್ರಾರಂಭಿಸಿದನು.
Kannada Bible (KNCL) BSI 2016
ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್‍ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಜರೇತಿನ ಯೇಸು ಬರುತ್ತಿದ್ದಾರೆ ಎಂದು ಅವನು ಕೇಳಿದಾಗ, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಕೂಗಿಕೊಳ್ಳಲಾರಂಭಿಸಿದನು.