Mark 10:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನೇಕ ಜನರು ಆ ಕುರುಡನನ್ನು ಗದರಿಸಿ ಕೂಗಕೂಡದೆಂದು ಅವನಿಗೆ ಹೇಳಿದರು. ಆದರೆ ಆ ಕುರುಡನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು!” ಎಂದು ಮತ್ತೆಮತ್ತೆ ಕೂಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.
Kannada BSI Bible 2016
ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕರು - ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.
Kannada Bible (KNCL) BSI 2016
ಅನೇಕರು ‘ಸುಮ್ಮನಿರು’ ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಮ್ಮನಿರುವಂತೆ ಅನೇಕರು ಅವನಿಗೆ ಒತ್ತಾಯಪಡಿಸಿ ಹೇಳಿದರು. ಆದರೆ ಅವನು ಇನ್ನೂ ಗಟ್ಟಿಯಾಗಿ, “ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಇನ್ನಷ್ಟು ಕೂಗಿದನು.