Mark 10:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ನಿಂತುಕೊಂಡು, “ಅವನನ್ನು ಕರೆಯಿರಿ” ಎಂದು ಹೇಳಿದನು. ಆದ್ದರಿಂದ ಅವರು ಆ ಕುರುಡನನ್ನು ಕರೆದು, “ಸಂತೋಷಪಡು! ಎದ್ದುನಿಲ್ಲು! ಯೇಸು ನಿನ್ನನ್ನು ಕರೆಯುತ್ತಿದ್ದಾನೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.
Kannada BSI Bible 2016
ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ನಿಂತು - ಅವನನ್ನು ಕರೆಯಿರಿ ಅನ್ನಲು ಅವರು ಆ ಕುರುಡನನ್ನು ಕರೆದು - ಧೈರ್ಯವಿರಲಿ, ಏಳು, ನಿನ್ನನ್ನು ಕರೆಯುತ್ತಾನೆ ಅಂದರು.
Kannada Bible (KNCL) BSI 2016
ಇದನ್ನು ಕೇಳಿ ಯೇಸು ಅಲ್ಲೇ ನಿಂತು, “ಅವನನ್ನು ಕರೆದುಕೊಂಡು ಬನ್ನಿ,” ಎಂದು ಅಪ್ಪಣೆಮಾಡಿದರು. ಅವರು ಹೋಗಿ, “ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು, ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಅವನಿಗೆ ಹೇಳಿದರು.