Mark 10:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
Kannada BSI Bible 2016
ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು; ಕೂಡಲೇ ಅವನಿಗೆ ಕಣ್ಣು ಬಂದವು; ಅವನು ಆ ದಾರಿಯಲ್ಲಿ ಆತನ ಹಿಂದೆ ಹೋದನು.
Kannada Bible (KNCL) BSI 2016
ಯೇಸು ಅವನಿಗೆ, “ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ಪಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.
Recommended Reading