Mark 11:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,
Kannada BSI Bible 2016
ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೇಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಪಗೆಗೂ ಬೇಥಾನ್ಯಕ್ಕೂ ಬಂದಾಗ
Kannada Bible (KNCL) BSI 2016
ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಕಡೆಗೆ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು, ಹೀಗೆಂದು ಹೇಳಿಕಳುಹಿಸಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆ ಮತ್ತು ಬೇಥಾನ್ಯಕ್ಕೂ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ,