Mark 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಮ್ಮ ಪಿತೃವಾದ ದಾವೀದನ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.
Kannada BSI Bible 2016
ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದ; ಮೇಲಣ ಲೋಕಗಳಲ್ಲಿ ಜಯ ಎಂದು ಆರ್ಭಟಿಸಿದರು.
Kannada Bible (KNCL) BSI 2016
ನಮ್ಮ ಪೂರ್ವಜ ದಾವೀದನ ಸಾಮ್ರಾಜ್ಯ ಉದಯವಾಗಲಿದೆ; ಅದಕ್ಕೆ ಶುಭವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಘೋಷಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬರಲಿರುವ ನಮ್ಮ ತಂದೆಯಾದ ದಾವೀದನ ರಾಜ್ಯವು ಆಶೀರ್ವಾದ ಹೊಂದಲಿ!” “ಉನ್ನತದಲ್ಲಿ ಹೊಸನ್ನ!” ಎಂದು ಹೇಳಿದರು.