Mark 11:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
Kannada BSI Bible 2016
ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಎಲೆಬಿಟ್ಟಿದ್ದ ಒಂದು ಅಂಜೂರದ ಮರವನ್ನು ದೂರದಲ್ಲಿ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಅದು ಅಂಜೂರದ ಹಣ್ಣಿನ ಕಾಲವಲ್ಲ.
Kannada Bible (KNCL) BSI 2016
ದೂರದಲ್ಲಿ ಎಲೆ ತುಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೇನಾದರೂ ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಿಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ಕಂಡು ಒಂದು ವೇಳೆ ಅದರಲ್ಲಿ ಹಣ್ಣು ಏನಾದರೂ ಸಿಕ್ಕೀತೆಂದುಕೊಂಡರು. ಆದರೆ ಯೇಸು ಅದರ ಹತ್ತಿರ ಬಂದಾಗ ಎಲೆಗಳನ್ನು ಹೊರತು ಮತ್ತೇನೂ ಕಾಣಲಿಲ್ಲ. ಅದು ಅಂಜೂರ ಫಲದ ಕಾಲವಾಗಿರಲಿಲ್ಲ.