Mark 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
Kannada BSI Bible 2016
ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆರೂಸಲೇವಿುಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಳ್ಳುವವರನ್ನೂ ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿದನು;
Kannada Bible (KNCL) BSI 2016
ತರುವಾಯ ಅವರು ಜೆರುಸಲೇಮಿಗೆ ಬಂದರು. ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋಗಿ, ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದರು; ನಾಣ್ಯ ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು; ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವರು ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ, ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.