Mark 11:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
Kannada BSI Bible 2016
ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
Kannada Bible (KNCL) BSI 2016
ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.