Mark 11:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅಲ್ಲಿ ಕಾಣುತ್ತಿರುವ ಊರಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸಿದಾಗ, ಯಾರೂ ಸವಾರಿ ಮಾಡಿಲ್ಲದ ಒಂದು ಕತ್ತೆ ಮರಿಯನ್ನು ಅಲ್ಲಿ ಕಟ್ಟಿರುವುದನ್ನು ಕಾಣುವಿರಿ. ಆ ಕತ್ತೆಯನ್ನು ಬಿಚ್ಚಿಕೊಂಡು, ನನ್ನ ಬಳಿಗೆ ತನ್ನಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.
Kannada BSI Bible 2016
ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಕ್ಕೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ.
Kannada Bible (KNCL) BSI 2016
“ನಿಮ್ಮೆದುರಿಗಿರುವ ಆ ಹಳ್ಳಿಗೆ ಹೋಗಿರಿ; ಅದನ್ನು ಸೇರುತ್ತಲೇ, ಕಟ್ಟಿಹಾಕಿರುವ ಹೇಸರಗತ್ತೆಯ ಮರಿಯೊಂದನ್ನು ಕಾಣುವಿರಿ. ಈವರೆಗೆ ಅದರ ಮೇಲೆ ಯಾರೂ ಸವಾರಿಮಾಡಿಲ್ಲ. ಅದನ್ನು ಬಿಚ್ಚಿ ಇಲ್ಲಿಗೆ ತನ್ನಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ನೀವು ಅದರೊಳಗೆ ಪ್ರವೇಶಿಸಿದ ಕೂಡಲೇ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ.