Mark 11:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
Kannada BSI Bible 2016
ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಿಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬುಡದಿಂದಲೂ ಒಣಗಿ ಹೋಗಿರುವದನ್ನು ಕಂಡರು.
Kannada Bible (KNCL) BSI 2016
ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು.