Mark 11:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
Kannada BSI Bible 2016
ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವದು.
Kannada Bible (KNCL) BSI 2016
ಆಗ ಯಾವನಾದರೂ ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ, ಮನಸ್ಸಿನಲ್ಲಿ ಸಂದೇಹಪಡದೆ, ಅದು ಸಂಭವಿಸುವುದೆಂದು ವಿಶ್ವಾಸಿಸಿದರೆ, ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.