Mark 11:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
Kannada BSI Bible 2016
ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥನೆಮಾಡುವಾಗೆಲ್ಲಾ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಅವನಿಗೆ ಕ್ಷವಿುಸಿರಿ; ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷವಿುಸಿಬಿಡುವನು ಅಂದನು.
Kannada Bible (KNCL) BSI 2016
ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.