Mark 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.
Kannada BSI Bible 2016
ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ನಿಮ್ಮನ್ನು - ಏನು ಹೀಗೆ ಮಾಡುವದು ಎಂದು ಕೇಳಿದರೆ - ಇದು ಸ್ವಾವಿುಯವರಿಗೆ ಬೇಕಾಗಿದೆ, ಅವರು ತಡಮಾಡದೆ ತಿರಿಗಿ ಇಲ್ಲಿಗೆ ಕಳುಹಿಸಿಕೊಡುವರು ಅನ್ನಿರಿ ಎಂದು ಹೇಳಿ ಕಳುಹಿಸಿದನು.
Kannada Bible (KNCL) BSI 2016
ಯಾರಾದರೂ ನಿಮ್ಮನ್ನು ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ. ಅವರು ಇದನ್ನು ಬೇಗನೆ ಹಿಂದಕ್ಕೆ ಕಳುಹಿಸಿಕೊಡುವರು,’ ಎಂದು ಹೇಳಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನಾದರೂ ನಿಮಗೆ, ‘ಏಕೆ ಹೀಗೆ ಮಾಡುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತದೇವರಿಗೆ ಅವಶ್ಯವಾಗಿದೆ, ಆತನು ಕೂಡಲೇ ಇದನ್ನು ಹಿಂದಕ್ಕೆ ಕಳುಹಿಸುವನು,’ ” ಎಂದು ಹೇಳಿರಿ ಎಂದರು.