Mark 11:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯನಾಯಕರು ಈ ಪ್ರಶ್ನೆಯ ಬಗ್ಗೆ ಚರ್ಚಿಸಿ ಒಬ್ಬರಿಗೊಬ್ಬರು, “‘ಯೋಹಾನನು ದೀಕ್ಷಾಸ್ನಾನ ಕೊಟ್ಟದ್ದು ದೇವರಿಂದ ಬಂದ ಅಧಿಕಾರದಿಂದ’ ಎಂದು ನಾವು ಉತ್ತರಿಸಿದರೆ, ಆಗ ‘ಮತ್ತೆ ನೀವು ಏಕೆ ಯೋಹಾನನನ್ನು ನಂಬಲಿಲ್ಲ?’ ಎಂದು ಯೇಸು ಕೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು;
Kannada BSI Bible 2016
ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು;
Kannada Bible (KNCL) BSI 2016
“ದೇವರಿಂದ ಬಂದಿತೆಂದು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.