Mark 11:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.
Kannada BSI Bible 2016
ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರಿಂದ ಬಂತೆಂದು ಹೇಳಿದರೆ ಏನಾಗುವದೋ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಯೋಹಾನನು ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳುಕೊಂಡಿದ್ದದರಿಂದ ಇವರಿಗೆ ಜನರ ಭಯವಿತ್ತು.
Kannada Bible (KNCL) BSI 2016
‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾವು, ‘ಮನುಷ್ಯರಿಂದ ಬಂತು’ ಎಂದು ಹೇಳುವುದಾದರೆ, ನಮಗೆ ಜನರ ಭಯವಿದೆ. ಏಕೆಂದರೆ ಯೋಹಾನನು ನಿಜವಾಗಿಯೂ ಪ್ರವಾದಿ ಎಂದು ಎಲ್ಲರೂ ಎಣಿಸಿಕೊಂಡಿರುವರು,” ಎಂದು ತಮ್ಮಲ್ಲಿ ಚರ್ಚಿಸಿಕೊಂಡರು.