Mark 11:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.
Kannada BSI Bible 2016
ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಅವರು - ನಾವು ಅರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ - ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಅಂದನು.
Kannada Bible (KNCL) BSI 2016
ಆದುದರಿಂದ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದು ಅವರಿಗೆ ಉತ್ತರಕೊಟ್ಟರು.