Mark 11:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ಕತ್ತೆಯನ್ನು ಯೇಸುವಿನ ಬಳಿಗೆ ತಂದು ತಮ್ಮ ಹೊದಿಕೆಗಳನ್ನು ಅದರ ಮೇಲೆ ಹಾಸಿದರು. ಆಗ ಯೇಸು ಅದರ ಮೇಲೆ ಕುಳಿತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.
Kannada BSI Bible 2016
ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು ಆ ಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕೂತುಕೊಂಡನು.
Kannada Bible (KNCL) BSI 2016
ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಿದರು. ಯೇಸು ಅದನ್ನು ಹತ್ತಿ ಕುಳಿತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದಾಗ ಯೇಸು ಅದರ ಮೇಲೆ ಕುಳಿತುಕೊಂಡರು.