Mark 12:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.
Kannada BSI Bible 2016
ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.