Mark 12:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.
Kannada BSI Bible 2016
ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ಅವರು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.
Kannada Bible (KNCL) BSI 2016
ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.