Mark 12:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
Kannada BSI Bible 2016
ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ,
Kannada Bible (KNCL) BSI 2016
ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?