Mark 12:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.
Kannada BSI Bible 2016
ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.
Kannada Bible (KNCL) BSI 2016
ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.