Mark 12:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಆತನಿಗೆ ಒಂದು ನಾಣ್ಯವನ್ನು ಕೊಟ್ಟರು. ಯೇಸು ಅವರಿಗೆ, “ನಾಣ್ಯದ ಮೇಲೆ ಯಾರ ಚಿತ್ರವಿದೆ? ಮತ್ತು ಅದರ ಮೇಲೆ ಯಾರ ಹೆಸರಿದೆ?” ಎಂದು ಕೇಳಿದನು. ಅವರು, “ಇದು ಸೀಸರನ ಚಿತ್ರ ಮತ್ತು ಸೀಸರನ ಹೆಸರು” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.
Kannada BSI Bible 2016
ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು - ಈ ತಲೆಯೂ ಮುದ್ರೆಯೂ ಯಾರದು ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.
Kannada Bible (KNCL) BSI 2016
ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್‍ಚಕ್ರವರ್ತಿಯವು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು.