Mark 12:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
Kannada BSI Bible 2016
ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು. ಅವರು ಆತನ ವಿಷಯದಲ್ಲಿ ಬಹು ಆಶ್ಚರ್ಯಪಟ್ಟರು.
Kannada Bible (KNCL) BSI 2016
ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು.